Tuesday, 2 January 2018

HinduJanajagrthi_3.mp4

ಲವ್ ಜಿಹಾದ್ ಮೂಲಕ ಪೋಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಿಂದೂ ಹೆಣ್ಣು ಮಕ್ಕಳನ್ನು ವಿದೇಶಗಳಲ್ಲಿರುವ ಭಯೋತ್ಪಾದಕರ ಕಾಮತೃಷೆ ತೀರಿಸಲು ಬಳಸುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡ ಸತ್ಯಜಿತ್ ಸುರತ್ಕಲ್ ಹೇಳಿದರು.

    ಹಿಂದೂ ಮುಖಂಡರ ಹಾಗೂ ಸಂಘಟನೆಗಳ ಮೇಲೆ ಪುತ್ತೂರು ಸಂಪ್ಯ ಪೋಲೀಸರು ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಪುತ್ತೂರಿನಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ನಡೆದ ಪ್ರತಿಭಟನಾ ಸಭೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಮುಸ್ಲಿಂ ಸಮಾಜದಿಂದ, ಕ್ರೈಸ್ತ ಮಿಷನರಿಗಳಿಂದ, ಪೋಲೀಸ್ ಅಧಿಕಾರಿಗಳಿಂದ ಹೀಗೆ ಎಲ್ಲಾ ಕಡೆಯಿಂದಲೂ ಹಿಂದೂ ಸಮಾಜದ ಮೇಲೆ ದೌರ್ಜನ್ಯಗಳಾಗುತ್ತಿದೆ. ದೇಶದ್ರೋಹಿ ಮುಸ್ಲಿಂ ಸಂಘಟನೆಯಾದ ಪೋಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಡೆಸುವ ದೇಶದ್ರೋಹಿ ಕೆಲಸಗಳನ್ನು ಹುರಿದುಂಬಿಸುವ ಕೆಲಸವನ್ನು ಕರ್ನಾಟಕದ ಸಿದ್ಧರಾಮಯ್ಯ ಸರಕಾರ ಮಾಡುತ್ತಿದ್ದು, ಇದಕ್ಕೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕೂಡಾ ಸಾಥ್ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಹಿಂದೂಗಳ ಸಹನೆಗೂ ಒಂದು ಮಿತಿ ಇದ್ದು, ಇದೇ ರೀತಿಯ ದೌರ್ಜನ್ಯ ಮುಂದುವರಿದಲ್ಲಿ ಮುಂದೆ ಆಗುವ ಅನಾಹುತಗಳಿಗೆ ಸರಕಾರವೇ ನೇರ ಹೊಣೆಯಾಗಲಿದೆ ಎಂದು ಅವರು ಎಚ್ಚರಿಸಿದರು. ಲವ್ ಜಿಹಾದ್ ಹೆಸರಿನಲ್ಲಿ ಪೋಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಹಿಂದೂ ಹೆಣ್ಣು ಮಕ್ಕಳನ್ನು ತನ್ನ ಬಲೆಗೆ ಬೀಳಿಸುತ್ತಿದೆ. ಅವರನ್ನು ತನಗೆ ಬೇಕಾದ ರೀತಿಯಲ್ಲಿ ಬಳಸಿಕೊಂಡು ಬಳಿಕ ಅವರನ್ನು ಮಾನವ ಬಾಂಬ್ ಆಗಿ, ಕಳ್ಳ ಸಾಗಾಟಗಾರರಾಗಿ ಹಾಗೂ ಉಗ್ರರ ಕಾಮತೃಷ್ಣ ತೀರಿಸುವವರಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.


ಇದೇ ಸಂದರ್ಭದಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್ ನ ಮಂಗಳೂರು ಜಿಲ್ಲಾಧ್ಯಕ್ಷ ಜಗದೀಶ್ ಸೇಣವ ಜನವರಿ 5 ರ ಒಳಗೆ ಹಿಂದೂ ಮುಖಂಡರ ಮೇಲೆ ಹಲ್ಲೆ ನಡೆಸಿದ ಸಂಪ್ಯ ಎಸೈ ಅಬ್ದುಲ್ ಖಾದರ್ ಹಾಗೂ ಮೂವರು ಕಾನ್ ಸ್ಟೇಬಲ್ ಗಳ ಸಸ್ಪಂಡ್ ಮಾಡದೇ ಹೋದಲ್ಲಿ ಜನವರಿ 7 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ದಕ್ಷಿಣಕನ್ನಡ ಜಿಲ್ಲಾ ಭೇಟಿ ನೀಡುವ ದಿನವೇ ಜಿಲ್ಲಾ ಬಂದ್ ಗೆ ಕರೆ ನೀಡಲು ಚಿಂತನೆ ನಡೆಸುವುದಾಗಿ ಎಚ್ಚರಿಸಿದರು.

No comments:

Post a Comment

Vivekananda THENKILA 2025 ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯ...

ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ  ಶಾಲಾಪ್ರಾರಂಭೋತ್ಸವ.. ದಕ್ಷಿಣಕನ್ನಡ: ರಾಜ್ಯದೆಲ್ಲೆಡೆ ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದೆ. ವಿವಿಧ ಶಾಲ...