Monday, 20 April 2020
nagarasabhe Puttur 3
ರಸ್ತೆ ಬದಿಯ ನಿರ್ಗತಿಕರು ಶಾಲೆಗೆ ಸ್ಥಳಾಂತರ
ಪುತ್ತೂರು; ಬೀದಿ ಬದಿಯಲ್ಲಿ ಭಿಕ್ಷೆ ಬೇಡಿ ಬದುಕುತ್ತಿದ್ದ ೮ ಮಂದಿಯನ್ನು ಇದೀಗ ಪುತ್ತೂರು ನೆಲ್ಲಿಕಟ್ಟೆ ಪ್ರಾಥಮಿಕ ಶಾಲೆಗೆ ನಗರಸಭಾ ಪೌರಾಯುಕ್ತೆ ರೂಪಾ ಶೆಟ್ಟಿ ಅವರ ನೇತೃತ್ವದಲ್ಲಿ ಶುಕ್ರವಾರ ಸ್ಥಳಾಂತರ ಮಾಡಲಾಯಿತು.
ಪುತ್ತೂರು ನಗರದ ಎಂ.ಟಿ ರಸ್ತೆಯ ಅಂಗಡಿ ಭಾಗಲಲ್ಲಿ ಈ ನಿರ್ಗತಿಕರು ಭಿಕ್ಷೆ ಬೇಡಿ ಹಲವು ವರ್ಷಗಳಿಂದ ಬದುಕುತ್ತಿದ್ದರು. ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಇವರಿಗೆ ಅನ್ನದ ತುತ್ತಿಗೂ ಕಷ್ಟವಾಗಿತ್ತು. ಈ ಸಂದರ್ಭದಲ್ಲಿ ಪುತ್ತೂರು ಮೆಸ್ಕಾಂ ಇಲಾಖೆಯ ಆಶ್ರಫ್ ಮತ್ತು ತಂಡದಿAದ ದಿನಂಪ್ರತಿ ಆಹಾರ ನೀಡುವ ಕೆಲಸ ನಡೆಯುತ್ತಿತ್ತು. ಆದರೆ ಮಳೆಯೂ ಆರಂಭವಾದ ಹಿನ್ನಲೆಯಲ್ಲಿ ಇವರನ್ನು ಸ್ಥಳಾಂತರ ಮಾಡುವ ನಿರ್ಧಾರವನ್ನು ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರು ನಗರಸಭಾ ಪೌರಾಯುಕ್ತರಿಗೆ ಸೂಚಿಸಿದರು.
ಈ ಹಿನ್ನಲೆಯಲ್ಲಿ ಅಲ್ಲಿದ್ದ ೮ ಮಂದಿ ನಿರ್ಗತಿಕರನ್ನು ಇದೀಗ ನೆಲ್ಲಿಕಟ್ಟೆ ಪ್ರಾಥಮಿಕ ಶಾಲೆಗೆ ಸ್ಥಳಾಂತರ ನಡೆಸಲಾಗಿದೆ. ಈ ಶಾಲೆಯ ಒಂದು ಕೋಣೆಯನ್ನು ಇವರಿಗಾಗಿ ತೆರವು ಮಾಡಲಾಗಿದೆ. ನೀರಿನ ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ನಿರ್ಗತಿಕರಿಗೆ ಊಟ ಕಾಫಿ ವ್ಯವಸ್ಥೆಯನ್ನು ಮೆಸ್ಕಾಂ ಇಲಾಖೆಯಿಂದ ಮಾಡಲಾಗುವುದು. ಉಳಿದ ಸೌಕರ್ಯಗಳನ್ನು ನಗರಸಭೆ ಆಡಳಿತದ ಮೂಲಕ ಮಾಡಿಕೊಡಲಾಗುವುದು ಎಂದು ಪೌರಾಯುಕ್ತೆ ರೂಪಾ ಶೆಟ್ಟಿ ತಿಳಿಸಿದರು.
Subscribe to:
Post Comments (Atom)
Vivekananda THENKILA 2025 ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯ...
ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಶಾಲಾಪ್ರಾರಂಭೋತ್ಸವ.. ದಕ್ಷಿಣಕನ್ನಡ: ರಾಜ್ಯದೆಲ್ಲೆಡೆ ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದೆ. ವಿವಿಧ ಶಾಲ...
-
ಕೇರಳ ರಾಜ್ಯದ ಎಂಡೋಸಲ್ಫಾನ್ ಸಂತ್ರಸ್ತರಿಗೆ ಅಲ್ಲಿನ ಸರಕಾರ ನೀಡಿದ ಪರಿಹಾರದ ಮಾದರಿಕ್ಕಿಂತಲೂ ಕನರ್ಾಟಕ ಅತ್ಯಂತ ಹಚ್ಚಿನ ರೀತಿಯ ಪರಿಹಾರವನ್ನು ನೀಡುವ ಮೂಲಕ ದೇಶಕ್ಕೆ...
No comments:
Post a Comment